ಅಭಿಪ್ರಾಯ / ಸಲಹೆಗಳು

1 ಡಯಟ್‌ ಸಂಸ್ಥೆಯ ಕುರಿತು

ಡಯಟ್ ಸಂಸ್ಥೆಯ ಕುರಿತು

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಚಿತ್ರದುರ್ಗ, ಈ ಸಂಸ್ಥೆಯು ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಶಾಲಾ ಶೈಕ್ಷ ಣಿಕ ಗುಣಮಟ್ಟವನ್ನು ಹೆಚ್ಚಿಸಲು, ವಿಜ್ಞಾನ ಕಾರ್ಯಕ್ರಮಗಳನ್ನು ಉತ್ತೇಜಿಸಲು ಮತ್ತು ಶಾಲಾ ಶಿಕ್ಷಣದಲ್ಲಿ ಪಾಂಡಿತ್ಯಪೂರ್ಣ ನಾಯಕತ್ವವನ್ನು ಬೆಳೆಸುವ ಗುರಿಯೊಂದಿಗೆ ಕೆಲಸ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಉಪಯುಕ್ತವಾಗುವ ವಿದ್ವತ್‌ ಪೂರ್ಣ ಕಾರ್ಯಗಳಲ್ಲಿ ತೊಡಗಿದೆ. ಎಲ್ಲಾ ಮಕ್ಕಳನ್ನು ಉತ್ತಮ ಮಾನವರಾಗಲು, ಸಾಮಾಜಿಕವಾಗಿ ಜವಾಬ್ದಾರಿಯುತ ನಾಗರೀಕರಾಗಲು ಮತ್ತು ಅವರು ಏನೇ ಶ್ರೇಷ್ಟತೆಯನ್ನು ಸಾಧಿಸಲು ಸಕ್ರಿಯಗೊಳಿಸಲು ಮತ್ತು ರಚನಾತ್ಮಕರಾಗಲು ಅವಶ್ಯವಾಗಿ ಬೇಕಾದ ನಿಗದಿತ ಜ್ಞಾನ, ಕೌಶಲಗಳು ಮತ್ತು  ಮೌಲ್ಯಗಳನ್ನು ಹೊಂದಲು ಸಜ್ಜುಗೊಳಿಸುವುದೇ ಈ ಸಂಸ್ಥೆಯ ಪ್ರಮುಖ ಗುರಿಯಾಗಿದೆ.

ಡಯಟ್‌ನ ಸಂರಚನೆ :

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಶೃೇಣಿಯ ಅಧಿಕಾರಿಯು ಡಯಟ್‌ನ ಮುಖ್ಯಸ್ಥರಾಗಿರುತ್ತಾರೆ.‌   “ಗ್ರೂಪ್‌ ಎ” ವೃಂದದ ಶ್ರೇಣಿಯ ಅಧಿಕಾರಿಗಳು ಹಿರಿಯ ಉಪನ್ಯಾಸಕರಾಗಿ ಹಾಗೂ “ಗ್ರೂಪ್‌ ಬಿ” ವೃಂದದ ಶ್ರೇಣಿಯ ಅಧಿಕಾರಿಗಳು ಉಪನ್ಯಾಸಕರಾಗಿ ಎಲ್ಲಾ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕರ್ತವ್ಯಗಳಲ್ಲಿ ಉಪನಿರ್ದೇಶಕರಿಗೆ ನೆರವು ನೀಡುತ್ತಾರೆ.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಅಂಗ ರಚನೆ :

ಈ ಸಂಸ್ಥೆಯು ಡಿ ಎಸ್‌ ಇ ಆರ್‌ ಟಿ ಬೆಂಗಳೂರು ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ 6 ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳು, 6 ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿಗಳು, ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಪ್ರೌಢಶಾಲೆಗಳು ಡಯಟ್‌ನ ಕಾರ್ಯನಿರ್ವಹಣೆಯಲ್ಲಿ ಅಂಗಸಂಸ್ಥೆಗಳಾಗಿ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಎಲ್ಲಾ ಕಚೇರಿಗಳ ಮುಖ್ಯಸ್ಥರು ಸಂಸ್ಥೆಯ ಕಾರ್ಯನಿರ್ವಹಣೆಯಲ್ಲಿ ಸಹಕರಿಸುತ್ತಾರೆ.

  

ಇತ್ತೀಚಿನ ನವೀಕರಣ​ : 14-07-2021 12:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080