ಅಭಿಪ್ರಾಯ / ಸಲಹೆಗಳು

ಜಿಲ್ಲಾ ಮತ್ತು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

ಜಿಲ್ಲಾ ಮತ್ತು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಸೃಜನಶೀಲ ಸಂಸ್ಕೃತಿಯನ್ನು ಬೆಳೆಸುವ ಸಲುವಾಗಿ, ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮ ನಡೆಸುವ ಉದ್ದೇಶ:

  • ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದು.
  • ಯುವ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅನ್ವೇಷಣೆ ಮತ್ತು ವಿಶ್ಲೇಷಣಾತ್ಮಕ ಪೃವೃತ್ತಿಯನ್ನು ಜಾಗೃತಿಗೊಳಿಸುವುದು.
  • ಯುವ ವಿದ್ಯಾರ್ಥಿಗಳಲ್ಲಿ ವೇದಿಕೆಯ ಭಯ ಹೋಗಲಾಡಿಸುವುದು.
  • ಅರಳುತ್ತಿರುವ ವಿದ್ಯಾರ್ಥಿಗಳಿಗೆ ನಾಟಕ ವೇದಿಕೆ ಸೃಷ್ಟಿಸುವುದು.
  • ಯುವ ಪ್ರತಿಭೆಗಳಿಗೆ ನಾಟಕದ ಮೂಲಕ ವೈಜ್ಞಾನಿಕ ಮತ್ತು ಪರಿಸರ ಕಾಳಜಿ ಬೆಳಸುವುದು.
  • ನಾಟಕವು ಯಾಂತ್ರಿಕ ಕ್ರಿಯೆಯಾಗಿರದೆ, ಪಾತ್ರಧಾರಿಗಳು ಮತ್ತು ವೀಕ್ಷಕರಿಗೆ ಭಾವನಾತ್ಮಕ, ಸೌಂದರ್ಯಾತ್ಮಕ ಅನುಭವ ನೀಡುವುದು.
  • ವೀಕ್ಷಕರನ್ನು ಸಂಪೂರ್ಣ ತೊಡಗಿಸಿಕೊಂಡು ವೈಜ್ಞಾನಿಕ ಸಂದೇಶ ಸಾರುವುದು.
  • ಸಾಮಾಜಿಕ ಸ್ವಾಸ್ಥ್ಯ, ಸಹಕಾರ ಮನೋಭಾವ, ಪರಿಸರ ಜಾಗೃತಿ, ಆರೋಗ್ಯ, ಜೀವ ವೈವಿಧ್ಯತೆ ಕಾಪಾಡುವುದು. ನೈಸರ್ಗಿಕ ಸಂಪನ್ಮೂಲ ಬಳಕೆ ಮತ್ತು ಅವುಗಳ ಸಂರಕ್ಷಣೆ ಬಗ್ಗೆ ಮಾಹಿತಿ ತಿಳಿಸುವುದು.

ಯಾರಿಗೆ ಕಾರ್ಯಕ್ರಮ ನಡೆಸುವುದು:

      ಸರ್ಕಾರಿ,ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳಲ್ಲಿ ೮ ರಿಂದ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿರ್ದ್ಯಾಥಿಗಳು.

ಭಾಗವಹಿಸಲು ಅರ್ಹತೆ:

ಬ್ಲಾಕ್ ಹಂತದ ಸ್ಪರ್ಧೆಯಲ್ಲಿ ಆಯ್ಕೆಯಾದ ಒಂದು ವಿದ್ಯಾರ್ಥಿಗಳ ತಂಡ. ಒಂದು ತಂಡದಲ್ಲಿ ಗರಿಷ್ಟ

೦೮ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶ.

ಕಾರ್ಯಕ್ರಮದ ಉಪಯೋಗ:

  • ದಕ್ಷಿಣ ವಲಯ,ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರತಿಭೆ ಗುರುತಿಸುವಿಕೆ.
  • ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳಸುವುದು.
  • ಪ್ರಮಾಣ ಪತ್ರ ಮತ್ತು ಬಹುಮಾನ ನೀಡಿ ಗೌರವಿಸುವಿಕೆ.
  • ನಾಟಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ವೇದಿಕೆಗೆ ತರುವುದರ ಮೂಲಕ ಭಯ ಹೋಗಲಾಡಿಸುವುದು.



 

ಇತ್ತೀಚಿನ ನವೀಕರಣ​ : 29-07-2022 11:18 AM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080